- Advertisement -
- Advertisement -




ಅಳಿಕೆ: ರಾಷ್ಟ್ರೀಯ ಸೇವಾ ಯೋಜನೆಯು ಆಯೋಜಿಸಿದ ಮಾದಕ ವಸ್ತುಗಳ ಸೇವನೆಯಿಂದ ಯುವಕರ ಮೇಲೆ ಆಗುವ ದುಷ್ಪರಿಣಾಮ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿಯ ಅರಿವು ಮೂಡಿಸುವ ಕಾರ್ಯಕ್ರಮ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಟ್ಲ ಪೊಲೀಸ್ ಉಪನಿರೀಕ್ಷಕ ರತ್ನ ಕುಮಾರ್ ಮಾದಕ ವಸ್ತುಗಳ ಸೇವನೆಯಿಂದ ಯುವಕರ ಮೇಲೆ ಆಗುವ ದುಷ್ಪರಿಣಾಮ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿಯ ಅರಿವನ್ನು ಮೂಡಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮತ್ತು ಸಂಚಾಲಕ ಚಂದ್ರಶೇಖರ ಭಟ್ ಯಸ್., ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಪೈ , ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಉದಯ ನಾಯ್ಕ್, ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಹರೀಶ್, ಯಂಕಪ್ಪ ಉಪಸ್ಥಿತರಿದ್ದರು. ಅಳಿಕೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- Advertisement -








