- Advertisement -
- Advertisement -






ಹವಾಮಾನ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆ ಜೂ.14ರಂದು ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ರೆಡ್ ಅಲರ್ಟ್ ಮುನ್ಸೂಚನೆ ನೀಡಿದ್ದು, ಕೆಲವೆಡೆ ಉತ್ತಮ ಮಳೆ ಕೂಡ ಆಗಿದೆ. ರೆಡ್ ಅಲರ್ಟ್ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿತ್ತು. ಆ ಮೂಲಕ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಚುರುಕಾಗುವ ಸಾಧ್ಯತೆಯಿದೆ.
- Advertisement -