Friday, November 27, 2026
spot_imgspot_img
spot_imgspot_img

ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು

- Advertisement -
- Advertisement -

ಮಡಿಕೇರಿ: ಕೇರಳದ ಜನರು ಹಾಗೂ ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರತಾಪ್ ಸಿಂಹ ಅವರು ಮಲಯಾಳಿ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂತಹ ನಿಂದನಾತ್ಮಕ ಹಾಗೂ ದ್ವೇಷ ಭಾವನೆ ಮೂಡಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕೊಡಗಿನ, ಗೋಣಿಕೊಪ್ಪದ ಕೊಡಗು ಹಿಂದೂ ಮಲಯಾಳಿ ಸಮಾಜದ ವತಿಯಿಂದ ದೂರು ಸಲ್ಲಿಕೆಯಾಗಿದೆ.

ಮಲಯಾಳಿ ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವ ಹೇಳಿಕೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಮಾಜದ ಮುಖಂಡರು ದೂರಿನಲ್ಲಿ ಒತ್ತಾಯಿಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!