Sunday, May 5, 2024
spot_imgspot_img
spot_imgspot_img

ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ

- Advertisement -G L Acharya panikkar
- Advertisement -

ಬೆಂಗಳೂರು ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್​ಐಆರ್​ ಬಗ್ಗೆ ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು ಎಂದಿದ್ದಾರೆ.

ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ. ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ. ಇರಲಿ ಎದುರಿಸೋಣ. ನಾನು ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಜಿ ಪರಮೇಶ್ವರ ಕೂಡ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದಾರೆ.

ಇದಕ್ಕೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಗೃಹ ಸಚಿವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. ಬಳಿಕ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದರು.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.

- Advertisement -

Related news

error: Content is protected !!