Monday, June 15, 2026
spot_imgspot_img
spot_imgspot_img

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲು

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

- Advertisement -

Related news

error: Content is protected !!