Sunday, June 30, 2024
spot_imgspot_img
spot_imgspot_img

ಸೈಬರ್ ಕ್ರೈಂ ನಲ್ಲಿ ಭಾಗಿಯಾಗಿರುವ ಆರೋಪ : ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್‌

- Advertisement -G L Acharya panikkar
- Advertisement -

ಸೈಬರ್ ಕ್ರೈಂ ನಲ್ಲಿ ಭಾಗಿಯಾಗಿರುವ ಆರೋಪದಡಿ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ.

ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ(ಜೂ.28) ಭಾರತೀಯರನ್ನು ಬಂಧಿಸಲಾಗಿದೆ.

ಸಿಐಡಿ ಮಡಿವೇಲಾ, ಬಟ್ಟರಮುಲ್ಲಾ ಮತ್ತು ನೆಗೊಂಬೊ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, 135 ಮೊಬೈಲ್ ಫೋನ್‌ಗಳು ಮತ್ತು 57 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರ ಎಸ್‌ಎಸ್‌ಪಿ ನಿಹಾಲ್ ತಲ್ದುವಾ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಸಂವಾದ ನಡೆಸಿ ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ಗ್ರೂಪ್‌ ಮೂಲಕ ಒಡ್ಡಿದ ಆಮಿಷಕ್ಕೆ ತುತ್ತಾಗಿ ವಂಚನೆಗೆ ಒಳಗಾದ ಸಂತ್ರಸ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಲ್ದುವಾ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ದುಬೈ ಮತ್ತು ಅಫ್ಘಾನಿಸ್ತಾನದಲ್ಲಿ ಅಂತಾರಾಷ್ಟ್ರೀಯ ಸಂಪರ್ಕಗಳನ್ನು ಹೊಂದಿದ್ದು, ಇವರೆಲ್ಲ ಹಣಕಾಸು ವಂಚನೆ, ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಗ್ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ.
ಸ್ಥಳೀಯರು ಹಾಗೂ ವಿದೇಶಿಯರು ಸಹ ಇವರ ಮೋಸದ ಜಾಲಕ್ಕೆ ಬಿದ್ದಿರುವ ಸಾಧ್ಯತೆ ಇದೆ. ತನಿಖೆ ಪ್ರಗತಿಯಲ್ಲಿದೆ ಎಂದು ನಿಹಾಲ್ ತಲ್ದುವಾ ಅವರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!