Saturday, June 13, 2026
spot_imgspot_img
spot_imgspot_img

ಗಾಂಜಾ ಸರಬರಾಜು ಆರೋಪ; ಇಬ್ಬರ ಬಂಧನ..!

- Advertisement -
- Advertisement -

ಮಡಿಕೇರಿ: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್‌‌ ಶೀಟ್‌‌ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉತ್ತರಪ್ರದೇಶ ರಾಜ್ಯದ ಬುಲಂದಶಾರ್ಹ ಜಿಲ್ಲೆಯ ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಎಂದಿ ಗುರುತಿಸಲಾಗಿದೆ. ಬಂಧಿತರಿಂದ 550 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!