Tuesday, May 7, 2024
spot_imgspot_img
spot_imgspot_img

ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಆಲೋಕ್ ಮೋಹನ್ ನೇಮಕ

- Advertisement -G L Acharya panikkar
- Advertisement -

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹಾಗೂ 1987ನೇ ಬ್ಯಾಚ್‌ನ ಡಾ| ಆಲೋಕ್ ಮೋಹನ್ ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕರರಾಗಿ ನೇಮಿಸಿ ರಾಜ್ಯ ಸರಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ಕೇಂದ್ರ ಸೇವೆಗೆ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಗ್ನಿ ಶಾಮಕದಳ ಮತ್ತು ತುರ್ತು ಸೇವೆಗಳು ಹಾಗೂ ಗೃಹ ರಕ್ಷಕ ದಳ ಮುಖ್ಯಸ್ಥರಾಗಿದ್ದ ಆಲೋಕ್ ಕುಮಾರ್ ಅವರಿಗೆ ರಾಜ್ಯದ ಡಿಜಿ-ಐಜಿಪಿಯಾಗಿ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರಕಾರ ಎರಡೂವರೆ ತಿಂಗಳ ಹಿಂದೆ ಆದೇಶಿಸಿತ್ತು. ಈಗ ರಾಜ್ಯ ಪೊಲೀಸ್ ಮುಖ್ಯಸ್ಥರ ಸ್ಥಾನಕ್ಕೆ ಅವರನ್ನೇ ಅಧಿಕೃತವಾಗಿ ಮುಂದುವರಿಸಿ ಆದೇಶ ಹೊರಡಿಸಿದೆ. ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

- Advertisement -

Related news

error: Content is protected !!