Sunday, April 28, 2024
spot_imgspot_img
spot_imgspot_img

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

- Advertisement -G L Acharya panikkar
- Advertisement -

ಬೆಂಗಳೂರು : ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರನ್ನು ನೇಮಿಸಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ ಅವರು ಇದೀಗ ಡಿಜಿ-ಐಜಿಪಿಯಾಗಿ ನೇಮಕಗೊಂಡಿದ್ದಾರೆ.

ಹಿರಿಯ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಪೊಲೀಸ್ ಮಹಾನಿರ್ದೇಶಕರ ಸ್ಥಾನಕ್ಕೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲೋಕ್ ಮೋಹನ್ 1987ರ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಚುನಾವಣೆ ಮುಗಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ಸೇವೆಗೆ ತೆರಳಿದ್ದರು. ಕೇಂದ್ರ ಸರ್ಕಾರ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕಗೊಳಿಸಿ ಆದೇಶಿಸಿತ್ತು. ಅವರಿಂದ ತೆರವಾದ ಸ್ಥಾನಕ್ಕೆ ಇದೀಗ ಅಲೋಕ್ ಮೋಹನ್ ಬಂದಿದ್ದಾರೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ 1987ರ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಸೇವಾ ಜೇಷ್ಠತೆ ಆಧಾರದಲ್ಲಿ ಡಾ. ಅಲೋಕ್ ಮೋಹನ್ ಅವರನ್ನೇ ಸರಕಾರ ಡಿಜಿ-ಐಜಿ ಹುದ್ದೆಗೆ ಪರಿಗಣಿಸಿದೆ.

ಕರ್ನಾಟಕ ಡಿಜಿ-ಐಜಿ ಹುದ್ದೆಗೆ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ರೇಸ್‌ನಲ್ಲಿದ್ದರು. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್, ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್, ನೇಮಕಾತಿ ವಿಭಾಗದ ಡಿಜಿಪಿ ಕಮಲ್ಪಂತ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ರೇಸ್‌ನಲ್ಲಿದ್ದರು ಎನ್ನಲಾಗಿದೆ.

ಬಿಹಾರ ಮೂಲದ ಡಾ. ಅಲೋಕ್ ಮೋಹನ್, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದರು. ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ಅಲೋಕ್ ಮೋಹನ್ ನಿವೃತ್ತರಾಗಲಿದ್ದಾರೆ. ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ಅಲೋಕ್ ಮೋಹನ್ ನಿವೃತ್ತರಾಗಲಿದ್ದಾರೆ.

- Advertisement -

Related news

error: Content is protected !!