- Advertisement -
- Advertisement -






ಕನ್ಯಾನ: ಕನ್ಯಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾನವಿಕ ಸಂಘ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕನ್ಯಾನದ ಪಿಯು ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಗಣೇಶ್ ಕೆ. ಮತ್ತು ಕನ್ಯಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಲೋಹಿತ್ ಬಿ.ಎ. ಅವರು ಅಂಬೇಡ್ಕರ್ ಅವರ ಜೀವನ, ಚಿಂತನೆಗಳು ಹಾಗೂ ಸಮಾಜ ಪರಿವರ್ತನೆಗೆ ನೀಡಿದ ಕೊಡುಗೆಗಳ ಬಗ್ಗೆ ಉಪನ್ಯಾಸಗಳನ್ನು ನೀಡಿ, ಅಂಬೇಡ್ಕರ್ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸವಿತಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರೇಷ್ಮಾ ಎ. ಕೆ. ಮತ್ತು ಬಳಗ ಪ್ರಾರ್ಥಿಸಿ, ಕನ್ನಡ ಉಪನ್ಯಾಸಕಿ ಡಾ. ಮೈತ್ರಿ ಭಟ್ ಅವರು ನಿರೂಪಿಸಿದರು.
- Advertisement -








