Friday, March 5, 2021

ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟಿ ಅಮೂಲ್ಯ, ಜಗದೀಶ್ ದಂಪತಿ

ಬೆಂಗಳೂರು: ನಟಿ ಅಮೂಲ್ಯ, ಜಗದೀಶ್ ದಂಪತಿ ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ಖರ್ಚು ಮಾಡುತ್ತಿದ್ದ ಹಣಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು ಜೈ ಶ್ರೀರಾಮ್ ಎಂದು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಣವನ್ನು ನೀಡಿರುವ ರಶೀದಿಗಳನ್ನು ಅಮೂಲ್ಯ ಮತ್ತು ಜಗದೀಶ್ ಹಂಚಿಕೊಂಡಿದ್ದಾರೆ.

ಜಗದೀಶ್ ಅವರು 1.50 ಲಕ್ಷ ರೂ. ಹಾಗೂ ಅವರ ತಂದೆ ಜಿ.ಎಚ್. ರಾಮಚಂದ್ರ ಅವರ ಹೆಸರಿನಲ್ಲಿ 1 ಲಕ್ಷ ರೂಪಾಯಿ ಹಣವನ್ನು ರಾಮಂದಿರ ನಿರ್ಮಾಣಕ್ಕೆ ನೀಡಲಾಗಿದೆ. ಚೆಕ್‍ಗೆ ಸಹಿ ಹಾಕುತ್ತಿರುವ ಹಾಗೂ ರಶೀದಿಗಳ ಫೋಟೋಗಳನ್ನು ಅಮೂಲ್ಯ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಯೋಧ್ಯೆ ಶ್ರೀರಾಮನಿಗಾಗಿ ನಮ್ಮ ಕಿರುಕಾಣಿಕೆ ಎಂದು ಕ್ಯಾಪ್ಷನ್ ಕೂಡ ನೀಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಕುಟುಂಬದ ಈ ಕಾರ್ಯಕ್ಕೆ ಸಾಕಷ್ಟು ಮೆಚ್ಚುಗೆ ಮತ್ತು ಉತ್ತಮವಾದ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ.

ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ ದಿನದಿಂದ ದೇಶಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ಮಾಡಲಾಗುತ್ತಿದೆ. ಅನೇಕ ರಾಜಕೀಯ ನಾಯಕರು, ರಾಮ ಭಕ್ತರು, ಉದ್ಯಮಿಗಳು, ನಟ-ನಟಿಯರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ಕರೆ ನೀಡಿದ್ದರು. ನಟ ಜಗ್ಗೇಶ್, ಬಹುಭಾಷಾ ನಟಿ ಪ್ರಣಿತಾ, ತೆಲುಗು ನಟ ಪವನ್ ಕಲ್ಯಾಣ್, ಇದೀಗ ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಕೂಡ ದೇಣಿಗೆ ನೀಡಿದ್ದಾರೆ.

- Advertisement -

MOST POPULAR

HOT NEWS

Related news

error: Content is protected !!