Sunday, June 14, 2026
spot_imgspot_img
spot_imgspot_img

ಕಟಪಾಡಿ: ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಮಗು ಸೇರಿದಂತೆ ಹಲವರಿಗೆ ಗಾಯ

- Advertisement -
- Advertisement -

ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಇಂದು ನಡೆದಿದೆ.

ಉಡುಪಿ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೂ ಸಹ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕಾಪು ಸಿಪಿಐ ಜಯಶ್ರೀ ಮಾಣೆ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಅರ್. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!