Saturday, June 28, 2025
spot_imgspot_img
spot_imgspot_img

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ; ಇಬ್ಬರು ಸಾವು..!!

- Advertisement -
- Advertisement -

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ, ಕನಕಮಣಿ (72) ಮತ್ತು ಆಕಾಶ್ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಬುಲೆನ್ಸ್‌ನಲ್ಲಿ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಅಹ್ಮದಾಬಾದ್ ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಂಬುಲೆನ್ಸ್‌ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!