Monday, April 29, 2024
spot_imgspot_img
spot_imgspot_img

ಅವಿವಾಹಿತ ಯುವಕನೊಂದಿಗೆ ಅಕ್ರಮ ಸಂಬಂಧ; ಯುವಕ ಹಾಗೂ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಅಕ್ರಮ ಸಂಬಂಧ ಹೊಂದಿದ್ದ ಯುವಕ ಹಾಗೂ ಮಹಿಳೆ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಅನಸೂಯ (35) ಹಾಗೂ ವಿಜಯ್ ಕುಮಾರ್(28) ಎಂದು ಗುರುತಿಸಲಾಗಿದೆ.

ಅನಸೂಯಗೆ ಮದುವೆಯಾಗಿ ಎರಡು ಮಕ್ಕಳು ಇದ್ದರೂ ಸಹ ಅವಿವಾಹಿತ ಯುವಕ ವಿಜಯ್ ಕುಮಾರ್​ನೊಂದಿಗೆ ಅಕ್ರಮ ಸಂಬಂಧವಿತ್ತು. ಅಲ್ಲದೇ ಇವರಿಬ್ಬರು ಕಳೆದ ಎರಡು ತಿಂಗಳ ಹಿಂದೆ ಊರು ಬಿಟ್ಟು ನಾಪತ್ತೆಯಾಗಿದ್ದರು. ಆದರೆ ಇದೀಗ ಗ್ರಾಮಕ್ಕೆ ಬಂದು ಏಕಾಏಕಿ ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಅನಸೂಯ, ಮಂಜುನಾಥ್ ಎನ್ನುವರೊಂದಿಗೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಇನ್ನು ವಿಜಯ್ ಕುಮಾರ್​ ಮದುವೆಯಾಗಿರಲಿಲ್ಲ .ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!