Saturday, August 15, 2026
spot_imgspot_img
spot_imgspot_img

ಬೆಳ್ತಂಗಡಿ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವು

- Advertisement -
- Advertisement -

ಬೆಳ್ತಂಗಡಿ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ ನಿವಾಸಿ ಇಸಾಕ್ ಎಂಬವರಿಗೆ ಸೇರಿದ ಇನ್ನೋವಾ ಕಾರನ್ನು ಅವರ ಸಂಬಂಧಿ ನೌಫಲ್ ಎಂಬವರು ರಾತ್ರಿ ಕಕ್ಕಿಂಜೆ ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದು ಬೆಳಿಗ್ಗೆ ನೋಡಿದಾಗ ಕಾರು ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ಕಾರಿನ ಮೌಲ್ಯ 2.25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಆಸುಪಾಸಿನಲ್ಲಿ ಹುಡುಕಾಡಿದರೂ ಕಾರು ಪತ್ತೆಯಾಗದ ಕಾರಣ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!