Sunday, June 29, 2025
spot_imgspot_img
spot_imgspot_img

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ

- Advertisement -
- Advertisement -

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು ಗುರುತಿಸಲಾಗಿದೆ.

ಇವರು ಹಿರಿಯ ನಾಗರೀಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದರು. ಮತದಾನ ಮಾಡುವುದಕ್ಕೂ ಮೊದಲೇ ಎದೆನೋವು ಕಾಣೀಸಿಕೊಂಡಿದ್ದು, ಮತದಾನ ಮಾಡಿ ನಂತರ ಆಸ್ಪತ್ರೆ ತೆರಳಲು ಪಿ.ಯಶೋಧಾ ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕ ಪಿ.ಯಶೋಧಾ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ್ಸತ್ಸೆ ಫಲಕಾರಿಯಾಗದೆ ಪಿ.ಯಶೋಧಾ ಅವರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!