Friday, May 17, 2024
spot_imgspot_img
spot_imgspot_img

ಬಂಟ್ವಾಳ : ಬಸ್ಸಿಗಾಗಿ ಕಾಯುತ್ತಿದ್ದ ವೃದ್ದನಿಗೆ ಬೈಕ್‌ ಡಿಕ್ಕಿ ಹೊಡೆದು ಗಂಭೀರ ಗಾಯ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಬಂಟ್ವಾಳ : ಹೆದ್ದಾರಿ ಬದಿ ಬಸ್ಸಿಗಾಗಿ ಕಾಯುತ್ತಿದ್ದ ವೃದ್ದರೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಸಂಭವಿಸಿದೆ.

ಗಾಯಗೊಂಡ ವ್ಯಕ್ತಿಯನ್ನು ಫರಂಗಿಪೇಟೆ ನಿವಾಸಿ ಶೇಖಬ್ಬ (71) ಎಂದು ಗುರುತಿಸಲಾಗಿದೆ.

ಇವರು ಫರಂಗಿಪೇಟೆ ಜಂಕ್ಷನ್ನಿನಲ್ಲಿ ಬುಧವಾರ ಮಧ್ಯಾಹ್ನ ಬಸ್ಸಿಗಾಗಿ ಕಾಯುತ್ತಿರುವಾಗ ಹೆದ್ದಾರಿಯಲ್ಲಿ ಅಕ್ಷಯ್ ನಾಯ್ಕ ಎಂಬವರು ಸವಾರಿ ಮಾಡಿಕೊಂಡು ಬಂದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಶೇಖಬ್ಬ ಅವರನ್ನು ತಕ್ಷಣ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!