- Advertisement -
- Advertisement -
ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕುಂಟೇಗೌಡನಹಳ್ಳಿ ಗೇಟ್ ಬಳಿ ಕಾರಿಗೆ ಪಂಚರ್ ಹಾಕುವಾಗ ವೇಳೆ ನಡೆದಿದೆ.
ಮೃತಪಟ್ಟ ಘಟನೆ ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40), ಉಮೇಶ್(40) ಎಂದು ಗುರುತಿಸಲಾಗಿದೆ.
ತುಮಕೂರು ಕಡೆಯಿಂದ ಶಿರಾಗೆ ಹೋಗುತ್ತಿರುವಾಗ ಘಟನೆ ಸಂಭವಿಸಿದೆ. ಕಾರು ಟೈರ್ ಪಂಚರ್ ಆಗಿತ್ತು. ಪಂಚರ್ ಹಾಕುತ್ತಿರುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವು ಸಂಭವಿಸಿದೆ. ಬೆಂಗಳೂರಿನ ಆವಲಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -