Friday, August 7, 2026
spot_imgspot_img
spot_imgspot_img

ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಮೃತ್ಯು

- Advertisement -
- Advertisement -

ರೈಲಿನಿಂದ ಬಿದ್ದು ಅಪರಿಚಿತ ಮಹಿಳೆಯೋರ್ವಳು ಮೃತ ಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ.

ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಬೆಳಗ್ಗಿನ ಜಾವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಭಾರತದ ಮೂಲದ ಮಹಿಳೆ ರೈಲಿನಿಂದ ಬಿದ್ದು ಅಥವಾ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರ ಬೇಕೆಂದು ಶಂಕಿಸಲಾಗಿದೆ.

ಮಹಿಳೆಯ ಮೃತ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು ಢಿಕ್ಕಿ ಹೊಡೆದ ರಭಸಕ್ಕೆ ಮೃತ ದೇಹವು ರೈಲ್ವೇ ಟ್ರ್ಯಾಕ್ ಮತ್ತು ಹೊಳೆಗೆ ಹಾಕಿರುವ ಬೃಹತ್ ಕಂಬದ ಬೀಮ್‌ನೊಳಗೆ ಹೋಗಿ ಬಿದ್ದಿದೆ. ಸಂಪೂರ್ಣ ನಜ್ಜುಗುಜ್ಜಾಗಿದ್ದ ಮಹಿಳೆಯ ಮೃತದೇಹವನ್ನು ಕಾಪು ಪೊಲೀಸರು ಮತ್ತು ರೈಲ್ವೇ ಪೊಲೀಸರ ಉಪಸ್ಥಿತಿಯಲ್ಲಿ ಉಡುಪಿ ಅಜ್ಜರಕಾಡು ಶವಾಗಾರಕ್ಕೆ ಸಾಗಿಸಲಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!