ವಿಟ್ಲ: ಒಕ್ಕಲಿಗ ಯಾನೆ ಗೌಡರ ಸಮಾಜ ಟ್ರಸ್ಟ್ ಅನಂತಾಡಿ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಅನಂತಾಡಿಯ ವಡ್ತೇಲುವಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಸಭಾ ಕಾರ್ಯಕ್ರಮವು ಟ್ರಸ್ಟ್ ಅಧ್ಯಕ್ಷ ಪುರಂದರ ಗೌಡ ತಾಳಿಪಡ್ಪು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಮಂಗಳೂರು ಕರ್ನಾಟಕ ಸಾವಯವ ಕೃಷಿ ಯೋಜನೆಯ ಆಡಳಿತ ನಿರ್ದೇಶಕ ಮೋಹನ ಗೌಡ ಕಲ್ಮಂಜ, ಕರ್ನಾಟಕ ಪ್ರದೇಶ ಜನತಾದಳದ ಸಂಘಟನಾ ಕಾರ್ಯದರ್ಶಿ ವಕೀಲ ಉಮೇಶ್ ಕುಮಾರ್ ವೈ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಕೆ. ಕುಶಾಲಪ್ಪ ಗೌಡ ಇರಂದೂರು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುಂದರ ಗೌಡ ನಡುಬೈಲು, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಎಂ. ಪೆರಾಜೆ, ಕಟ್ಟಡ ಸಮಿತಿ ಅಧ್ಯಕ್ಷ ಜಗನ್ನಾಥ ಗೌಡ ಅಶ್ವತ್ತಡಿ, ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ ಪೂವಪ್ಪ ಗೌಡ ಹಾಗೂ ಯುವ ಘಟಕದ ಅಧ್ಯಕ್ಷ ಚಂದ್ರಹಾಸ ಎಂ.ಜೆ. ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ನೂತನ ಸಮುದಾಯ ಭವನದ ನಿರ್ಮಾಣಕ್ಕೆ ಸಂಬಂಧಿಸಿದ ವಿಜ್ಞಾಪಣಾ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಸಮಾಜದ ಅಭಿವೃದ್ಧಿಗೆ ಸಮುದಾಯ ಭವನ ಮಹತ್ವದ ಪಾತ್ರವಹಿಸಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ದರ್ಣಪ್ಪ ಗೌಡ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪ್ರವೀಣ್ ಎನ್.ಆರ್. ವಂದಿಸಿದರು. ಧನ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯದರ್ಶಿ ರಮೇಶ್ ಸಹಕರಿಸಿದರು.








