- Advertisement -
- Advertisement -


ತೆಲುಗು ದೇಶಂ ಪಕ್ಷದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಸರಳ ಬಹುಮತ ಗಳಿಸಿ ಅಧಿಕಾರದ ಗದ್ದುಗೆ ಏರಲಿದೆ.
ಎನ್‌ಡಿಎ 168 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಡಿಪಿ 131, ಜಸಸೇನಾ ಪಕ್ಷ 20 ಮತ್ತು ಬಿಜೆಪಿ 7ರಲ್ಲಿ ಮುಂದಿದೆ. ಜೂನ್ 9 ರಂದು ಅಮರಾವತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಿಗದಿಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
- Advertisement -








