Wednesday, September 2, 2026
spot_imgspot_img
spot_imgspot_img

6 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳ ನೇಮಕ: ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್ ಅಂಗಾರ

- Advertisement -
- Advertisement -

ಬೆಂಗಳೂರು: ಸಿಎಂ ಬಿಎಸ್​ ಯಡಿಯೂರಪ್ಪ ನವರು ರಾಜ್ಯದ ಕೆಲ ಜಿಲ್ಲೆಗಳ ಉಸ್ತುವಾರಿ ಸಚಿವ ನೇಮಕ ಮಾಡಿ ಆದೇಶ ನೀಡಿದ್ದಾರೆ.

ಬಂದರು ಮತ್ತು ಮೀನುಗಾರಿಕೆ ಸಚಿವ ಹಾಗೂ ಸುಳ್ಯದ ಶಾಸಕರಾದ ಎಸ್.ಅಂಗಾರರವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ವಹಿಸಿದ್ದು, ರಾಜ್ಯಪಾಲರು ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ ರವರು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಉಮೇಶ್ ವಿಶ್ವನಾಥ ಕತ್ತಿ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರು ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿ, ಪೌರಾಡಳಿತ ಮತ್ತು ಸಕ್ಕರೆ ಸಚಿವರಾದ ಎನ್ ನಾಗರಾಜ್ (ಎಂ ಟಿ ಬಿ) ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ, ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ್ ರುದ್ರಪ್ಪ ನಿರಾಣಿ ಕಲುಬುರುಗಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

- Advertisement -

Related news

error: Content is protected !!