


ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ 23ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರು ಬಿಜೆಪಿ ಚುನಾವಣಾ ಸಂಯೋಜಕರಾದ ಚನಿಲ ತಿಮ್ಮಪ್ಪ ಶೆಟ್ಟಿ ಅವರು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಅವರು, ಏಪ್ರಿಲ್ 23ರಂದು ಬೆಳಗ್ಗೆ 8.30ಕ್ಕೆ ಅಣ್ಣಾ ಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. 10.30ಕ್ಕೆ ಪುತ್ತೂರಿಗೆ ಬಂದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಾದ ಬಳಿಕ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವಾ, ನಗರ. ಮಂಡಲ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳ ಉಪಸ್ಥಿತರಿದ್ದರು.