Monday, February 10, 2025
spot_imgspot_img
spot_imgspot_img

ಛಡಿಯೇಟು ಹೊಡೆದುಕೊಳ್ಳುತ್ತೇನೆ ಎಂದು ಶಪಥ ಮಾಡಿ ಈಡೇರಿಸಿದ ಅಣ್ಣಾಮಲೈ

- Advertisement -
- Advertisement -

ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ನಿನ್ನೆ ಕೈಗೊಂಡ ಶಪಥದ ಪ್ರಕಾರ ಇಂದು ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಮತ್ತು ದಿನಕ್ಕೆ ಆರು ಛಡಿಯೇಟು ಹೊಡೆದುಕೊಳ್ಳುತ್ತೇನೆ ಎಂದು ಶಪಥ ಮಾಡಿದ್ದಾರೆ. ಆ ಪ್ರಕಾರಇಂದು ಬೆಳಗ್ಗೆ ತನ್ನ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ.ಅಣ್ಣಾ ಯೂನಿರ್ವಸಿಟಿಯ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಕೃತ್ಯದ ಆರೋಪಿಯನ್ನು ಡಿಎಂಕೆ ರಕ್ಷಿಸುತ್ತಿದೆ ಎಂದು ಆರೋಪಿಸಿ ಅಣ್ಣಾಮಲೈ ಪ್ರತಿಭಟನೆ ಮಾಡುತ್ತಿದ್ದಾರೆ.ಪೊಲೀಸರು ಜ್ಞಾನಶೇಖರನ್ ಎಂಬಾತನನ್ನು ಬಂಧಿಸಿದ್ದರು. ಈತ ಯುವತಿಯ ಖಾಸಗಿ ವೀಡಿಯೊ ಚಿತ್ರಿಕರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯ ಮೇಲೆ 2011ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಾಗಿದ್ದು. ಈತನ ವಿರುದ್ಧ ಸುಮಾರು 17 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆದರೂ ಈ ಆರೋಪಿ ಸ್ವತಂತ್ರವಾಗಿ ಓಡಾಡುತ್ತಿದ್ದಾನೆ.ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ 48 ದಿನಗಳ ಸುದೀರ್ಘ ಉಪವಾಸ ಕೈಗೊಂಡಿರುವ ಅಣ್ಣಾಮಲೈ, ಆರು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!