




ಅಳಿಕೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.)ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ ಚಿಗುರೆಲೆ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇದರ ಸಂಯೋಜನೆಯಲ್ಲಿ ಸ್ವಾತಂತ್ರೋತ್ಸವ ಕವಿಗೋಷ್ಠಿ – 2025 ಕಾರ್ಯಕ್ರಮ ಆ.23-08-2025ನೇ ಶನಿವಾರ ಮಧ್ಯಾಹ್ನ 2.30 ರಿಂದ ಸಂಜೆ 5.00 ವರೆಗೆ ಶ್ರೀ ವಿಷ್ಣುಮಂಗಲ ದೇವಸ್ಥಾನದ ವಠಾರ ಎರುಂಬು ಅಳಿಕೆಯಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಉದ್ಘಾಟಿಸಲಿದ್ದಾರೆ. ಕ.ರಾ.ಮ ಸಾ.ಪರಿಷತ್ತು ಬಂಟ್ವಾಳ ತಾಲೂಕು ಘಟಕ ಗೌರವಾಧ್ಯಕ್ಷ ಬಾಲಕೃಷ್ಣ ಕಾರಂತ್ ಎರುಂಬು ಅಧ್ಯಕ್ಷತೆ ವಹಿಸಲಿದ್ದಾರೆ.

ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ಸ್ಥಾಪಕಾಧ್ಯಕ್ಷ ಗೋಕುಲ್ ನಾಥ್ ಪಿ ವಿ, ಬಂಟ್ವಾಳ ಮಕ್ಕಳ ಕಲಾ ಲೋಕ ಅಧ್ಯಕ್ಷ ರಮೇಶ್ ಬಾಯಾರು, ಕನ್ನಡ ಸಾಹಿತ್ಯ ಪರಿಷತ್ ವಿಟ್ಲ ಹೋಬಳಿ ಘಟಕ ಅಧ್ಯಕ್ಷ ಗಣೇಶ್ ಪ್ರಸಾದ ಪಾಂಡೇಲು, ಎರುಂಬು ಶ್ರೀ ವಿಷ್ಣುಮಂಗಲ ಸೇವಾ ಸಮಿತಿ ಅಧ್ಯಕ್ಷ ವಸಂತ ಕುಲಾಲ್, ಎರುಂಬು ಶ್ರೀ ಸುಜ್ಞಾನ ಮಹಿಳಾ ಮಂಡಳಿ ಅಧ್ಯಕ್ಷೆ ಶಾಲಿನಿ ಸದಾನಂದ ಶೆಟ್ಟಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.









