ಬಂಟ್ವಾಳ ವಲಯಕ್ಕೆ ಅತ್ಯುತ್ತಮ ವಲಯ ಪ್ರಶಸ್ತಿ


ಮಂಗಳೂರು: ವಿಟ್ಲ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (SKPA) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ವಾರ್ಷಿಕ ಮಹಾ ಸಭೆ ಮಂಗಳೂರು ಸೈಂಟ್ ಸೆಬಾಸ್ಟಿಯನ್ ಚರ್ಚ್ ಹಾಲ್ ಬೆಂದೂರ್ ವೆಲ್ ಸಭಾ ಭವನದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಬೆಂಗಳೂರು ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ KPA ಇದರ ಅಧ್ಯಕ್ಷ ಹೆಚ್ ಎಸ್ ನಾಗೇಶ್ ಉದ್ಘಾಟಿಸಿದರು. SKPA ಜಿಲ್ಲಾ ಅಧ್ಯಕ್ಷ ನವೀನ್ ರೈ ಪುತ್ತೂರು ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ ಗೋಪಾಲ್ ಸುಳ್ಯ ಛಾಯಾ ಮತ್ತು ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಸೌತ್ ಕೆನರಾ ಫೊಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ವಾಸುದೇವ ರಾವ್, ಕಟ್ಟಡ ಸಮಿತಿ ಅಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಇವರು ಭಾಗವಹಿಸಿದ್ದರು.
ಬಂಟ್ವಾಳ ವಲಯವು ಅತ್ಯುತ್ತಮ ವಲಯ ಪ್ರಶಸ್ತಿ ಪಡೆಯಿತು. ಬಂಟ್ವಾಳ ವಲಯದ ಅಧ್ಯಕ್ಷರಾದ ರಾಜೇಂದ್ರ. ಕೆ ಪ್ರಶಸ್ತಿಯನ್ನು ಸ್ವೀಕರಿಸಿದರು.
ಗೌರವ ಅಧ್ಯಕ್ಷರಾದ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣರಾಜ್ ರಾವ್, ಸದಸ್ಯರು, ಜಿಲ್ಲಾ ಕಾರ್ಯದರ್ಶಿ ಅಜಯ್ ಕುಮಾರ್, ಕೋಶಾಧಿಕಾರಿ ಹೆರಿಕ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.








