Sunday, October 6, 2024
spot_imgspot_img
spot_imgspot_img

ರಾಜ್ಯದ ಜನರಿಗೆ ಮತ್ತೊಂದು ಶಾಕ್‌ : ಬಸ್‌ ಪ್ರಯಾಣ ದರ ಹೆಚ್ಚಿಸಲು ಕೆಎಸ್‌ಆರ್‌ಟಿಸಿಯಿಂದ ಪ್ರಸ್ತಾವನೆ ಸಲ್ಲಿಕೆ

- Advertisement -
- Advertisement -

ಇತ್ತೀಚೆಗಷ್ಟೇ ಪೆಟ್ರೋಲ್‌, ಡೀಸೆಲ್‌ ತೈಲ ಬೆಲೆ ಏರಿಕೆ ಮಾಡಲಾಗಿತ್ತು. ಈ ಶಾಕ್ ನಿಂದ ಜನತೆ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಏರಿಕೆ ಮಾಡಲು ಕೆಎಸ್‌ಆರ್‌ಟಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.

ಬಸ್ ಪ್ರಯಾಣ ದರ 15% ರಿಂದ 20% ವರೆಗೆ ಹೆಚ್ಚಿಸಲು ಜುಲೈ 14ರಂದೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಬಂದಿದೆ. ನಾನಿನ್ನೂ ಅದನ್ನು ನೋಡಿಲ್ಲ. ದರ ಏರಿಕೆ ಮಾಡುವ ಬಗ್ಗೆ ಸಧ್ಯಕ್ಕೆ ಯಾವುದೇ ನಿರ್ಧಾರವಿಲ್ಲ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!