Saturday, June 28, 2025
spot_imgspot_img
spot_imgspot_img

ಭದ್ರತಾ ಸಿಬ್ಬಂದಿಯಿಂದ ಮಾವೋವಾದಿ ವಿರೋಧಿ ಕಾರ್ಯಾಚರಣೆ; ಮೂವರು ನಕ್ಸಲರು ಸಾವು

- Advertisement -
- Advertisement -

ರಾಯ್ಪುರ್: ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿ ನಿಂತ ನಂತರ ಮೂವರು ಮಾವೋವಾದಿಗಳ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಘಟನಾ ಸ್ಥಳದಲ್ಲಿ, ಸ್ವಯಂಚಾಲಿತ ಬಂದೂಕುಗಳು ಮತ್ತು ಸ್ಫೋಟಕಗಳು ಪತ್ತೆಯಾಗಿವೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!