- Advertisement -
- Advertisement -



ಹುಬ್ಬಳ್ಳಿ: ಅಪಾರ್ಟ್‌ಮೆಂಟ್ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಬೀಗ ಮುರಿದು ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್ ಕದ್ದೊಯ್ದಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ.
ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್‌ನ ಸೃಷ್ಟಿ ಎಲೈಟ್ ಅಪಾರ್ಟ್‌ಮೆಂಟ್‌ನಲ್ಲಿ ಈ ಕಳ್ಳತನ ನಡೆದಿದ್ದು, ಶದರ್‌ಕುಮಾರ ಮೌರ್ಯ ಎಂಬುವರ ಮನೆಗೆ ಬೀಗ ಹಾಕಿದ್ದ ವೇಳೆ ಕಳ್ಳರು ಕೃತ್ಯ ಎಸಗಿದ್ದಾರೆ.
ಮನೆಯ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿದ ಕಳ್ಳರು, 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್ ಕಳವು ಮಾಡಿದ್ದಾರೆ. ಶದರ್‌ಕುಮಾರ ಮೌರ್ಯ ಮನೆಗೆ ವಾಪಸ್ ಬಂದ ಬಳಿಕ ಕಳ್ಳತನ ನಡೆದಿರುವುದು ಗೊತ್ತಾಗಿದೆ.
ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.
- Advertisement -








