Saturday, June 28, 2025
spot_imgspot_img
spot_imgspot_img

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನ ಕುಮಾ‌ರ್ ಮಾರ್ತ ನೇಮಕ : ಪುತ್ತೂರು ನಗರ, ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ನೇಮಕ!

- Advertisement -
- Advertisement -

ಪುತ್ತೂರು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನ ಕುಮಾರ್ ಮಾರ್ತ ಅವರನ್ನು ನೇಮಕ ಮಾಡಲಾಗಿದ್ದು, ಈ ಜವಾಬ್ದಾರಿಯನ್ನು ಅತ್ಯಂತ ಸಕ್ರೀಯವಾಗಿ ನಿರ್ವಹಿಸುತ್ತಾ ಪಕ್ಷದ ಸಂಘಟನೆಯಲ್ಲಿ ತಳಮಟ್ಟದಲ್ಲಿ ಸದೃಡಗೊಳಿಸುತ್ತಾ ಮುಂಬರುವ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಶಕ್ತಿ ತುಂಬುವ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವ ಸತತ ಪ್ರಯತ್ನ ಮಾಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಗೊಳಿಸಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ ಬಿಜೆಪಿ ಅಧ್ಯಕ್ಷರಾಗಿ ಶಿವಕುಮಾರ್ ಕಲಿಮಾರ್ ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಶ್ ಪ್ರಭು ಮತ್ತು ಅನಿಲ್ ತೆಂಕಿಲ ಅವರನ್ನು ನೇಮಕಗೊಳಿಸಲಾಗಿದೆ.

ಪುತ್ತೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ಗೌಡ ಮತ್ತು ಪ್ರಶಾಂತ ನೆಕ್ಕಿಲಾಜೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

- Advertisement -

Related news

error: Content is protected !!