Friday, September 18, 2026
spot_imgspot_img
spot_imgspot_img

ತುಳು ಅಧಿಕೃತ ರಾಜ್ಯ ಭಾಷೆಯಾಗಿ ಅನುಮೋದನೆ: ಸಿಎಂ ಡಿ.ಕೆ.ಶಿವಕುಮಾ‌ರ್ ಘೋಷಣೆ

- Advertisement -
- Advertisement -

ಮಂಗಳೂರು : ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸತತ ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಸಂಪುಟದಲ್ಲಿ ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

”ಹಿಂದಿನ ಸರಕಾರಗಳು ಯಾಕೆ ಮಾಡಲಿಲ್ಲ ಅಂತ ನಾನು ಪ್ರಶ್ನೆ ಮಾಡುವುದಿಲ್ಲ. ನಮಗೆ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ. ನಾವು ಬದುಕಿನ ಮೇಲೆ ಮಾಡುತ್ತೇವೆ” ಎಂದು ಸಿಎಂ ತಿಳಿಸಿದರು.

ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ದಕ್ಷಿಣ ಕನ್ನಡ ಮತ್ತು, ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ತುಳು ಮಾತೃಭಾಷಿಗರಾಗಿದ್ದಾರೆ. ಈ ಮೂಲಕ ಸರಕಾರ ಭಾವನಾತ್ಮಕ ವಿಚಾರಕ್ಕೂ ಮನ್ನಣೆ ನೀಡಿದೆ.

- Advertisement -

Related news

error: Content is protected !!