Thursday, June 18, 2026
spot_imgspot_img
spot_imgspot_img

ಗಂಡ ಹೆಂಡತಿ ನಡುವೆ ಗಲಾಟೆ; ಕುಡಿದ ಅಮಲಿನಲ್ಲಿ ಮಚ್ಚಿನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರಾಯ..!

- Advertisement -
- Advertisement -

ಕುಡಿದ ಅಮಲಿನಲ್ಲಿ ಪತ್ನಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಹಾಡಿಯಲ್ಲಿ ನಡೆದಿದೆ.

ಮೃತಪಟ್ಟ ಯುವತಿ ಮಾಚಿ(20) ಹಾಗೂ ಬಂಧಿತ ಆರೋಪಿ ರವಿ(28) ಎಂದು ಗುರುತಿಸಲಾಗಿದೆ.

ಕುಡಿದ ಅಮಲಿನಲ್ಲಿ ಗಂಡ ಹೆಂಡತಿ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಪತಿ ರವಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕುತ್ತಿಗೆ ಮತ್ತು ತಲೆಗೆ ಬಲವಾಗಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಕೊಲೆ ಮಾಡಿ ರವಿ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಗೋವಿಂದರಾಜು, ವೃತ್ತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಕರಕಿಕಟ್ಟಿ ಮತ್ತು ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಬಂಧಿಕರಿಂದ ದೂರು ಪಡೆದುಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಹುಲ್ಲಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊತ್ತನಹಳ್ಳಿ ಕಾಲೋನಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಇದರಿಂದ ಕುಡಿದುಕೊಂಡು ಮನೆಗಳಲ್ಲಿ ಗಲಾಟೆಗಳು ನಡೆಯುತ್ತಿವವೆ. ಈ ಕೊಲೆಗೆ ಅಕ್ರಮವಾಗಿ ಮಧ್ಯ ಮಾರಾಟವಾಗುತ್ತಿರುವುದೇ ಮುಖ್ಯ ಕಾರಣವಾಗಿದೆ.

- Advertisement -

Related news

error: Content is protected !!