Saturday, April 27, 2024
spot_imgspot_img
spot_imgspot_img

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ.

- Advertisement -G L Acharya panikkar
- Advertisement -

ಬರಹ ✍️ಸುಖ್ ಪಾಲ್ ಪೊಳಲಿ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ “ಮಂಗಳೂರು ದಸರಾ” ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳೋದಿಲ್ಲ.

ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು.ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ.

ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ.ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಬುತ ಕಲಾವಿದರಿಗೊಂದು ಸೆಲ್ಯೂಟ್.

ಬರಹ ✍️ಸುಖ್ ಪಾಲ್ ಪೊಳಲಿ.

- Advertisement -

Related news

error: Content is protected !!