- Advertisement -
- Advertisement -




ಉಳ್ಳಾಲ, ತೊಕ್ಕೊಟ್ಟು ಫೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 11ಕ್ಕೆ ಏರಿದೆ. ಈತನು ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಮುಹಮ್ಮದ್ ಸುಹೈಲ್ ಸಹಕಾರ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ವಿವರವಾದ ತನಿಖೆಯ ನಂತರ ಸುಹೈಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನರ ಬಂಧನ ಆಗಿತ್ತು. ಇದೀಗ ಮುಹಮ್ಮದ್ ಸುಹೈಲ್ ಬಂಧನದೊಂದಿಗೆ ಈ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಆರಿಫ್ ಕೊಲೆ ಪ್ರಕರಣದಲ್ಲಿ 15 ಮಂದಿಯ ಪಾತ್ರ ಇರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿತ್ತು.
- Advertisement -








