Wednesday, July 22, 2026
spot_imgspot_img
spot_imgspot_img

ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಮೃತ್ಯು

- Advertisement -
- Advertisement -

ಬೆಳಗಾವಿ: ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ನಡೆದಿದೆ.

ಹರಿಯಾಣ ಮೂಲದ ಲೆಫ್ಟಿನೆಂಟ್ ‌ಅಮಿತ್‌ಸಿಂಗ್ ಮೃತರು. ವಿಂಗ್ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡುವ ವೇಳೆ ಘಟನೆ ನಡೆದಿದ್ದು‌, ಬೆಳಗಾವಿಯ ಎಂಎಲ್ಐಆರ್‌ಸಿ ಕಮಾಂಡೋ ವಿಂಗ್‌‌ನಲ್ಲಿ ಟ್ರೇನಿಂಗ್‌ನಲ್ಲಿ ಅಧಿಕಾರಿಯಾಗಿದ್ದರು ಎನ್ನಲಾಗಿದೆ.

ಸ್ವಿಮ್ಮಿಂಗ್ ಮಾಡುವಾಗಲೇ ತೀವ್ರ ಹೃದಯಾಘಾತವಾಗಿದ್ದು, ಅಧಿಕಾರಿಯನ್ನು ಮೇಲಕ್ಕೆ ತಂದು ಲೈಫ್ ಗಾರ್ಡ್ ಪ್ರದೀಪ್ ಕುಮಾರ್ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಂಬುಲೆನ್ಸ್ ನಲ್ಲಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯದಲ್ಲೇ ಲೆಫ್ಟಿನೆಂಟ್ ‌ಅಮಿತ್ ಸಿಂಗ್ ಸಾವನ್ನಪ್ಪಿದ್ದಾರೆ. ಟಿಳಕವಾಡಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!