Sunday, August 9, 2026
spot_imgspot_img
spot_imgspot_img

ಅರ್ನಾಬ್ ಗೋ ಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ.

- Advertisement -
- Advertisement -

ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬಂಧಿಸಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸ್ ಕಸ್ಟಡಿಗೆ ಪಡೆಯಲು ಮುಂಬೈ ಪೊಲೀಸರು ವಿಫಲರಾಗಿದ್ದರೆ, ಜಾಮೀನು ಪಡೆಯಲು ಅರ್ನಬ್ ಗೋಸ್ವಾಮಿ ಸಫಲರಾಗಿಲ್ಲ. ಅರ್ನಬ್ ಗೋಸ್ವಾಮಿ ಇನ್ನಿಬ್ಬರು ಆರೋಪಿಗಳನ್ನು ಕೂಡ 14 ದಿನಗಳ ನ್ಯಾಯಾಂಗ ಬಂಧನದಲ್ಲಿಡುವಂತೆ ಕೋರ್ಟ್ ಆದೇಶಿಸಿದೆ.

ಆಲಿಭಾಗ್ ಜಿಲ್ಲಾ ನ್ಯಾಯಾಲಯ ಈ ಆದೇಶ ನೀಡಿದೆ. ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.

ಬುಧವಾರ ಬೆಳಿಗ್ಗೆ ಮುಂಬೈನಲ್ಲಿರುವ ಅರ್ನಾಬ್ ಗೋ ಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿದ್ದ ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಆಲಿ ಭಾಗ್ ಗೆ ಕರೆದೊಯ್ಯಲಾಗಿತ್ತು.

ಇಂಟೇರಿಯರ್ ಡಿಸೈನರ್ ಆಗಿದ್ದ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಚೋದನೆ ಸಂಬಂಧಿಸಿದಂತೆ ಇದೀಗ ಅರ್ನಾಬ್ ಗೋ ಸ್ವಾಮಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!