Monday, June 15, 2026
spot_imgspot_img
spot_imgspot_img

ಕ್ರಿಕೆಟ್​ ಪ್ರೇಮಿಗಳ ಮದುವೆ; ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆಗೆ ವ್ಯವಸ್ಥೆ..!

- Advertisement -
- Advertisement -
vtv vitla

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ ಫೈನಲ್‌ಗೆ ಕಾಲಿಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ ಬಂಧುಗಳಿಗಾಗಿ ಇಂಡೋ-ಕಿವೀಸ್ ಸೆಮಿ ಫೈನಲ್ ಮ್ಯಾಚ್ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ಎಲ್ಲೆಡೆ ವೈರಲ್ ಆಗುತ್ತಿದೆ.

ನಿನ್ನೆ ಪಾವಗಡದ ಎಸ್ ಎಸ್ ಕೆ ಕಲ್ಯಾಣ ಮಂಟಪದಲ್ಲಿ ಕ್ರಿಕೇಟ್ ಪ್ರೇಮಿಗಳ ಮದುವೆ ನಡೆದಿದ್ದು, ಆರತಕ್ಷತೆಗೆ ಬರುವ ಸಂಬಂಧಿಕರು, ಸ್ನೇಹಿತರಿಗಾಗಿ ಎಲ್‌ಈ‌ಡಿ ಮೂಲಕ ಪಂದ್ಯವೀಕ್ಷಣೆಗೆ ಅವಕಾಶ ಕಲ್ಪಿಸಿದ್ದರು. ಸೌಂದರ್ಯ ಮತ್ತು ಕಾರ್ತಿಕ್ ಕ್ರಿಕೆಟ್​ ಪ್ರೇಮಿಗಳಾಗಿದ್ದು, ತಮ್ಮ ಮದುವೆಗೆ ಆಗಮಿಸಿದವರಿಗೆ ಸೆಮಿ ಫೈನಲ್ ಪಂದ್ಯ ವೀಕ್ಷಿಸಲು ವ್ಯವಸ್ಥೆ ಮಾಡಿದ್ದರು. ತೀವ್ರ ಕುತೂಹಲ ಮೂಡಿಸಿದ್ದ ಪಂದ್ಯಕ್ಕಾಗಿ ಎಲ್‌ಈ‌ಡಿಗಳ ಅಳವಡಿಸಿದ್ದಲ್ಲದೆ, ಕ್ರಿಕೆಟ್​ ಪ್ರೇಮಿಗಳ ಮನ ತಣಿಸಿದ್ದರು.

ಆರ್ಕೇಸ್ಟ್ರಾ ಜೊತೆ ಮ್ಯಾಚ್ ನೋಡಲು ಎಲ್‌ಈ‌ಡಿ ವ್ಯವಸ್ಥೆ ಮಾಡಲಾಗಿದ್ದು, ಮದುವೆ ಆರತಕ್ಷತೆಯಲ್ಲಿ ಭರ್ಜರಿ ಊಟದ ಜೊತೆ ಪಂದ್ಯ ವೀಕ್ಷಣೆಯ ಅವಕಾಶ ಕಲ್ಪಿಸಿದ್ದರು. ಟೀಂ ಇಂಡಿಯಾ ಗೆಲ್ಲುತ್ತಿದ್ದಂತೆ ಮದುವೆ ಮಂಟಪದಲ್ಲಿ ಸಂಭ್ರಮಾಚರಣೆ ಜೋರಾಗಿತ್ತು.

- Advertisement -

Related news

error: Content is protected !!