- Advertisement -
- Advertisement -


ಜೋಡುಕಲ್ : ಜೋಡುಕಲ್ ಗ್ರಾಮದಲ್ಲಿ ಕ್ರೈಸ್ತ ಮಿಷನರಿಯು, ಜನರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಮಾಹಿತಿ ದೊರೆತ ಬಜರಂಗದಳದ ಕಾರ್ಯಕರ್ತರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು.
ಕಾರ್ಯಾಚರಣೆಯ ವೇಳೆಯಲ್ಲಿ ಮಿಷನರಿಯನ್ನು ಸಾರ್ವಜನಿಕರ ಸಹಾಯದಿಂದ ಸೆರೆ ಹಿಡಿಯಲಾಯಿತು.ಸಾರ್ವಜನಿಕರು ಮಿಷನರಿಯನ್ನು ಹಿಡಿದು , ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರ ತಂಡ ಸ್ಥಳಕ್ಕೆ ತಕ್ಷಣವೇ ಆಗಮಿಸಿ, ಆರೋಪಿತನನ್ನು ವಶಕ್ಕೆ ಪಡೆದು ತನಿಖೆ ಪ್ರಾರಂಭಿಸಿದೆ. ಈ ಕುರಿತು ಧರ್ಮ ಬಲವಂತದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಬಜರಂಗದಳದ ಕಾರ್ಯಕರ್ತರು ಇಂತಹ ಮತಾಂತರ ಚಟುವಟಿಕೆಗಳನ್ನು ತಡೆಯಲು ತಾವು ಸದಾ ಸಜ್ಜಾರಾಗಿದ್ದೇವೆ ಎಂದು ಹೇಳಿದ್ದಾರೆ. ಸ್ಥಳೀಯರು ಈ ಘಟನೆ ಬಗ್ಗೆ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ಇಂತಹ ಪ್ರಕರಣಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದ್ದಾರೆ.
- Advertisement -








