- Advertisement -
- Advertisement -



ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಯೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳ ರಾಜ್ಯದಲ್ಲಿ ಬಂಧಿಸಿದ್ದಾರೆ.
ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿ ಅಹ್ಮದ್ ಗಜನಿ (39) ಬಂಧಿತ ಆರೋಪಿ.ಈತನ ಮೇಲೆ ಪ್ರಕರಣ ದಾಖಲಾಗಿದ್ದು, 7 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದು. ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು. ಕ್ಯಾಲಿಕಟ್ ರಿಕ್ಷಾ ನಿಲ್ದಾಣದಲ್ಲಿ ಆರೋಪಿತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
- Advertisement -








