Saturday, September 5, 2026
spot_imgspot_img
spot_imgspot_img

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ತ್ರಿಶೂ‌ರ್ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ.

1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರಿಗೆ ತಲ್ವಾರ್‌ನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಕೃತ್ಯಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ತ್ರಿಶೂರ್‌ನಿಂದ ಅ.13ರಂದು ದಸ್ತಗಿರಿ ಮಾಡಿ ಸುಳ್ಯದ ನ್ಯಾಯಾಲಯದ ನ್ಯಾಯಧೀಶರು ಮುಂದೆ ಹಾಜರು ಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!