- Advertisement -
- Advertisement -


ಬಳ್ಳಾರಿ: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಆರೋಪಿಯ ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಆರೋಪಿ ಮಂಜುನಾಥ್ (26) ಎಂದು ತಿಳಿದು ಬಂದಿದೆ.ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ.ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ ಕಾನ್ಸ್‌ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು.
- Advertisement -








