Sunday, September 6, 2026
spot_imgspot_img
spot_imgspot_img

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ವಂಚನೆ; ಆರೋಪಿ ಬಂಧನ

- Advertisement -
- Advertisement -

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 0 417, 419, 467, 468, 471 2. ໖. 2 ಪ್ರಕರಣ ದಾಖಲಾಗಿರುತ್ತದೆ.ಸದ್ರಿ ಪ್ರಕರಣದ ತನಿಖೆ ನಡೆಸಲಾಗಿ, ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪಿ ಪಡುವನ್ನೂರು ಗ್ರಾಮದ ಅಬ್ದುಲ್ ಹಾಶೀಮ್ (34) ಎಂಬಾತನನ್ನು ನ.6 ರಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!