Sunday, August 9, 2026
spot_imgspot_img
spot_imgspot_img

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ; ಆರೋಪಿಯ ಬಂಧನ

- Advertisement -
- Advertisement -

ಬೆಳ್ತಂಗಡಿ: ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಇತ್ತೆ ಬರ್ಪೆ ಅಬೂಬಕರ್(71) ಎಂದು ತಿಳಿದು ಬಂದಿದೆ.ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಕುರಿತು ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!