Sunday, September 13, 2026
spot_imgspot_img
spot_imgspot_img

ಗುಂಡ್ಲುಪೇಟೆ: ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಗುಂಡ್ಲುಪೇಟೆ: ತಾಲೂಕಿನ ಕೊಡಸೋಗೆ ಗ್ರಾಮದ ರಸ್ತೆ ಬದಿಯ ಜಮೀನೊಂದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಜಮೀನಿನ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ತೆರಕಣಾಂಬಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ತಾಲೂಕಿನ ಕೊಡಸೋಗೆ ಗ್ರಾಮದ ರಮೇಶ್ (49) ಎಂದು ತಿಳಿದು ಬಂದಿದೆ.ಈತ ತನ್ನ ಜಮೀನಿನಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ತೆರಕಣಾಂಬಿ ಪೊಲೀಸರು ಸಬ್ ಇನ್ಸ್ ಪೆಕ್ಟರ್ ಮಹೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಗಿಡದ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಬೆಳೆಯಲಾಗಿದೆ ಎಂದು ಒಪ್ಪಿಕೊಂಡಿದ್ದಾನೆಂದು ಪೊಲೀಸರು ಮಾಹಿತಿ ನೀಡಿ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!