Monday, July 20, 2026
spot_imgspot_img
spot_imgspot_img

ಮಂಗಳೂರು: ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶನ…!

- Advertisement -
- Advertisement -

ವಿಟ್ಲ-ಮಂಗಳೂರು ಸೆಲೀನಾ ಬಸ್ ಕಂಡಕ್ಟರ್ ಆರೋಪಿ ಇರ್ಫಾನ್ ಬಂಧನ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್‌ನ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ಪ್ರಸ್ತುತ ಅಬುಬಕರ್ ಅವರ ಬಾಡಿಗೆ ಮನೆ, ಕರ್ವೇಲು, ಉಪ್ಪಿನಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರು–ವಿಟ್ಲ ಮಾರ್ಗದ ಸೆಲೇನ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 9, 2026ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆ ಮಾಡಿದ್ದಲ್ಲದೆ, “ಹಿಂದಿನ ಸೀಟಿಗೆ ಬಾ” ಎಂದು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ವಿದ್ಯಾರ್ಥಿನಿಯರ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!