Monday, October 26, 2026
spot_imgspot_img
spot_imgspot_img

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ -ಮೂವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದವರಾದ ಪೃಥ್ವಿರಾಜ್(21) ಮತ್ತು ಚಿಂತನ್(19) ಎಂದು ಗುರುತಿಸಲಾಗಿದೆ.ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ತಿಳಿಸಿದ್ದಾರೆ.ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ಅ.ಕ್ರ 54/2025 ಕಲಂ 191[1], 191[2], 191[3], 118[1]. 118 [2], 109, 103(3), 190 ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!