- Advertisement -
- Advertisement -



ಪುತ್ತೂರು: ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಾಗೂ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಗುರುತಿಸಲಾಗಿದೆ.ಯುವಕರು ಬಿರುಮಲೆ ಗುಡ್ಡೆಯಲ್ಲಿ ನೀನು ಬ್ಯಾರಿಯ ಎಂದು ಪ್ರಶ್ನಿಸಿದ್ದು ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿತ್ತು. ಇದರ ಫೋಟೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(C), 57, 196(1)(a) 3 3(5) BNS 2023 ರಂತೆ ಪ್ರಕರಣ ದಾಖಲಾಗಿದೆ.
- Advertisement -