- Advertisement -
- Advertisement -



ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 04.11.2015 ರಂದು ರಾತ್ರಿ, ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ವಿಟ್ಲ ಪೊಲೀಸ್ ಠಾಣಾ ಅಕ್ರ 218/2015 ಕಲಂ: 448,341,323, 376(G),506,34 ಭಾದಂಸಂ ರಂತೆ ದಾಖಲಾಗಿದ್ದ ಪ್ರಕರಣದ ಆರೋಪಿಯಾದ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.
ಆತನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು, ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ, ಸ್ಥಳೀಯ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು, ದಿನಾಂಕ 13-07-2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
- Advertisement -








