Sunday, June 14, 2026
spot_imgspot_img
spot_imgspot_img

ಮಂಗಳೂರು : ಫೊರಮ್‌ಮಾಲ್‌ನಲ್ಲಿರುವ ಶೆರ್‌ಲಾಕ್‌ ಪಬ್ ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನ : ಪುತ್ತೂರಿನ ನಾಲ್ವರು ಯುವಕರು ಅರೆಸ್ಟ್‌

- Advertisement -
- Advertisement -

ಮಂಗಳೂರು : ಫೊರಮ್‌ಮಾಲ್‌ನಲ್ಲಿರುವ ಶೆರ್‌ಲಾಕ್‌ ಪಬ್‌ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಆ.3 ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಿವಾಸಿಗಳಾದ ಮಹೇಶ್‌, ವಿನಯ್‌,ನಿತೇಶ್‌,ಪ್ರೀತೆಶ್‌ ಅರೆಸ್ಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸುಮಾರು 22 ವರ್ಷದ ಯುವತಿ ತನ್ನ ಸ್ನೇಹಿತೆಯೊಂದಿಗೆ ಮಂಗಳೂರು ನಗರದ ಪಾಂಡೇಶ್ವರ ಫೊರಮ್‌ಮಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಶೆರ್‌ಲಾಕ್‌ ಪಬ್‌ಗೆ ವೀಕೆಂಡ್ ಪಾರ್ಟಿಗೆ ಬಂದಿದ್ದು, ರಾತ್ರಿ 10.30ರ ಸುಮಾರಿಗೆ ಆರೋಪಿಗಳು ದೂರುದಾರೆ ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿ ಮಾನಭಂಗ ಮಾಡಲು ಯತ್ನಿಸಿದ್ದು, ಆಕೆಯ ಸ್ನೇಹಿತೆಗೂ ಅವಾಚ್ಯ ಶಬ್ದಗಳಿಂದ ಬೈದು. ಬೀಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ.

ಸಂತ್ರಸ್ತ ಯುವತಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!