- Advertisement -
- Advertisement -
ಉಪ್ಪಿನಂಗಡಿ: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ.21/2019ರ ಪ್ರಕರಣದಲ್ಲಿ ಕಲಂ 504, 323, 324, 326, 506 r/w 34 ಐಪಿಸಿ ಅಡಿಯಲ್ಲಿ ಆರೋಪಿಯಾಗಿರುವ ಕಡಬ ನಿವಾಸಿ ವಿನೋದ್ ಅಲಿಯಾಸ್ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬಾತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 6 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಈತನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ (HC-826) ಶಿವರಾಮ ರೈ ಹಾಗೂ ಪೊಲೀಸ್ ಕಾನ್ಸ್ಟೇಬಲ್ (PC-765) ಸಂತೋಷ್ ಕೆ.ಸಿ ಅವರು 05-03-2026ರಂದು ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -








